Thursday, July 7, 2022

Latest Posts

ಉಡುಪಿ| ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟಕ್ಕೆ ಯತ್ನ, ಆರೋಪಿಗಳಿಬ್ಬರ ಬಂಧನ, 2 ಕೆ.ಜಿ. ಗಾಂಜಾ ವಶ

ಉಡುಪಿ: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ಬಂದಿದ್ದ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತರಿಂದ 2 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಧಾರವಾಡ ಮೂಲದ ಅಬ್ದುಲ್ ರಜಾಕ್ (35) ಮತ್ತು ಶೇಖ್ ಫಾರೂಕ್ (36) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಬ್ಬರೂ ಸಂಜೆ 4.30ರ ಸುಮಾರಿಗೆ ಮಣಿಪಾಲ ಸಮೀಪದ ಪೆರಂಪಳ್ಳಿ ಶೀಂಬ್ರಾದ ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಲು ಬಂದಿದ್ದರು.
ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಮಣಿಪಾಲ ಪಿಎಸೈ ರಾಜಶೇಖರ್ ವಿ. ಅವರು ಸಿಬ್ಬಂದಿಯವರೊಂದಿಗೆ ಸ್ಥಳಕ್ಕೆ ದಾಳಿ ಮಾಡಿದ್ದಾರೆ. ಪರಿಶೀಲನೆ ಮಾಡಿ ಬಂಧಿತರಿಂದ 60ಸಾವಿರ ರೂ. ಮೌಲ್ಯದ 2 ಕೆ.ಜಿ. ಗಾಂಜಾ, 1ಲಕ್ಷ ರೂ. ಮೌಲ್ಯದ ಮಾರುತಿ 800 ಕಾರು ಹಾಗೂ ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಯವರಾದ ಥಾಮ್ಸನ್, ಅಬ್ದುಲ್ ರಜಾಕ್, ಸಲ್ಮಾನ್‌ಖಾನ್, ದಯಾಕರ ಪ್ರಸಾದ್ ಅವರು ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss