ಉಡುಪಿ| 36 ತಾಸುಗಳ ಕಾಲ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್: ಜಿಲ್ಲಾಧಿಕಾರಿ

0
219

ಉಡುಪಿ: ಜಿಲ್ಲೆಯಲ್ಲಿ ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ 36 ತಾಸುಗಳ ಲಾಕ್‌ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದ್ದು, ಲಾಕ್‌ಡೌನ್ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಎಚ್ಚರಿಸಿದ್ದಾರೆ.

ಈ 36 ತಾಸುಗಳ ಲಾಕ್‌ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳಾದ ಹಾಲು, ದಿನಪತ್ರಿಕೆ, ಔಷಧ, ವೈದ್ಯಕೀಯ ಸೇವೆ, ತರಕಾರಿ, ಹಣ್ಣು, ಮೀನು, ಮಾಂಸ ದಿನಸಿ ಅಂಗಡಿಗಳು ತೆರೆದಿರುತ್ತವೆ. ಹೊಟೇಲ್‌ಗಳಲ್ಲಿ ಪಾರ್ಸಲ್ ಊಟ ತಿಂಡಿ ನೀಡುವುದಕ್ಕೆ ಅವಕಾಶ ಇದೆ. ಇದರ ಹೊರತು ಇತರೆ ಯಾವುದೇ ಚಟುವಟಕೆಗಳಿಗೆ ಅನುಮತಿ ಇಲ್ಲ. ಈಗಾಗಲೇ ತಹಶೀಲ್ದಾರ್ ಅವರಿಂದ ಮದುವೆಗೆ ಅನುಮತಿ ಪಡೆದವವರು ಮದುವೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here