Wednesday, August 17, 2022

Latest Posts

ಉತ್ತಮ ಕಥೆ, ಅವಕಾಶ ಸಿಕ್ಕಿದಲ್ಲಿ ಬಾಲಿವುಡ್‌ಗೆ ಜಿಗಿಯಲು ಸೈ ಎಂದ ಸಿನಿ ಶೆಟ್ಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾನು ಇನ್ನೂ ವಿದ್ಯಾರ್ಥಿನಿ. ಮೊದಲು ನನ್ನ ಸ್ನಾತಕೋತ್ತರ ಪದವಿ ಶಿಕ್ಷಣ ಮುಗಿಸಬೇಕು. ಸದ್ಯ ಮಾಡೆಲ್ ಆಗುವ ಉದ್ದೇಶವಿಲ್ಲ. ಐದು ವರ್ಷಗಳ ಕಾಲ ಫೈನಾನ್ಸ್ ಕ್ಷೇತ್ರದಲ್ಲಿ ದುಡಿಯುವ ಆಸಕ್ತಿ ಹೊಂದಿದ್ದೇನೆ. ಆ ಬಳಿಕ ಒಳ್ಳೆಯ ಅವಕಾಶ ಸಿಕ್ಕಲ್ಲಿ ಮಾಡೆಲ್ ಆಗುವ ಬಗ್ಗೆ ಯೋಚಿಸುತ್ತೇನೆ…
ಹೀಗೆಂದವರು ಫೆಮಿನಾ ಮಿಸ್ ಇಂಡಿಯಾ ವಿನ್ನರ್ ಸಿನಿ ಶೆಟ್ಟಿ. ವಿನ್ನರ್ ಆದ ಬಳಿಕ ಮೊದಲ ಬಾರಿಗೆ ತಾಯ್ನಾಡಿಗೆ ಆಗಮಿಸಿದ ಅವರು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಫೆಮಿನಾ ಮಿಸ್ ಇಂಡಿಯಾ ಜೀವನದಲ್ಲಿ ಭರವಸೆ, ವಿಶ್ವಾಸ ನೀಡಿದೆ. ಮುಂದಕ್ಕೆ ಮಿಸ್ ವರ್ಲ್ಡ್ ಆಗುವ ಗುರಿ ಹೊಂದಿದ್ದೇನೆ. ಇದಕ್ಕೆ ತಯಾರಿ ನಡೆಸುತ್ತಿದ್ದೇನೆ ಎಂದ ಅವರು, ಉತ್ತಮ ಕಥೆ, ಅವಕಾಶ ಸಿಕ್ಕಿದಲ್ಲಿ ಬಾಲಿವುಡ್ ಅಂಗಳಕ್ಕೆ ಕಾಲಿಡಲು ಸಿದ್ಧ ಎಂದು ಹೇಳಿದರು.
ಇದಕ್ಕೂ ಮುನ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಕೆಯ ನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಪ್ರಯಾಣಿಕರು ಆಕೆಯೊಂದಿಗೆ ಫೋಟೋ, ಸೆಲ್ಫಿ ತೆಗೆದುಕೊಂಡು ಸಂತಸಪಟ್ಟರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!