Thursday, June 30, 2022

Latest Posts

ಉತ್ತರಖಂಡದ ಒಂದು ದಿನದ ಮುಖ್ಯಮಂತ್ರಿಯಾಗಲಿದ್ದಾರೆ 19 ವರ್ಷದ ಸೃಷ್ಟಿ ಗೋಸ್ವಾಮಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಷ್ಟ್ರೀಯ ಹೆಣ್ಣುಮಕ್ಕಳ ದಿನದ ಅಂಗವಾಗಿ ಇಂದು ಹರಿದ್ವಾರದ ಸೃಷ್ಟಿ ಗೋಸ್ವಾಮಿ(19) ಅವರು ಒಂದು ದಿನ ಉತ್ತರಖಂಡದ ಮುಖ್ಯಮಂತ್ರಿಯಾಗಲಿದ್ದಾರೆ.

ರಾಜ್ಯದ ಬೇಸಿಗೆ ರಾಜಧಾನಿ ಗೈರ್‌ಸೈನ್‌ನಿಂದ ಅವರು ಆಡಳಿತ ನಡೆಸಲಿದ್ದು, ರಾಜ್ಯ ಸರ್ಕಾರದ ಹಲವು ಯೋಜನೆಗಳನ್ನು ಪರಿಶೀಲಿಸಲಿದ್ದಾರೆ.

ಬಿಎಸ್’ಸಿ ಪದವಿ ವಿದ್ಯಾರ್ಥಿಯಾಗಿರುವ ಸೃಷ್ಟಿ ಗೋಸ್ವಾಮಿ ಮಾತನಾಡಿ, ಇದು ನಿಜವೇ ಎಂದು ನಾನು ನಂಬಲಾರೆ. ನಾನು ತುಂಬಾ ಶಾಕ್ ನಲ್ಲಿದ್ದೇನೆ. ಆದರೆ ಅದೇ ಸಮಯದಲ್ಲಿ, ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವಾಗ ಯುವಕರು ಆಡಳಿತದಲ್ಲಿ ಉತ್ತಮ ಸಾಧನೆ ಮಾಡಬಲ್ಲರು ಎಂಬುದನ್ನು ಸಾಬೀತು ಮಾಡಲು ನಾನು ಪ್ರಯತ್ನಿಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು ಸೃಷ್ಟಿ ಅವರು ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆ, ಪ್ರವಾಸೋದ್ಯಮ ಇಲಾಖೆಯ ಹೋಂ ಸ್ಟೇ ಯೋಜನೆ, ಅಟಲ್ ಆಯುಷ್ಮಾನ್ ಯೋಜನೆ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ.

ಸಿಎಂ ಆಗಿ ಅಧಿಕಾರ ಸ್ವೀಕರಿಸುವ ಮೊದಲು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಈ ನಿಟ್ಟಿನಲ್ಲಿ ಉತ್ತರಾಖಂಡ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗವು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss