ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಉತ್ತರಾಖಂಡದಲ್ಲಿ ಸಂಭವಿಸಿದ ಹಿಮಕುಸಿತದಿಂದಾಗಿ ಧೌಲಿಗಂಗಾ ನದಿಯಲ್ಲಿ ಉಂಟಾದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯ ಆರನೇ ದಿನಕ್ಕೆ ಕಾಲಿಟ್ಟಿದೆ.
ಎನ್ ಡಿಆರ್ ಎಫ್ ಕಮಾಂಡರ್ ಪಿ ಕೆ ತಿವಾರಿ ಸುದ್ದಿಗಾರೊಂದಿಗೆ ಮಾತನಾಡಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ನಮ್ಮ ತಂಡ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ನದಿಯಲ್ಲಿ ಕೂಡ ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಗುರುವಾರ ಧೌಲಿ ಗಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದರಿಂದ ತಪೋವನ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಸುರಂಗದೊಳಗೆ ಕಾರ್ಯಾಚರಣೆ ನಡೆಸುತ್ತಿದ್ದ ಭದ್ರತಾ ಪಡೆ ಸಿಬ್ಬಂದಿ ಹೊರ ಬಂದಿದ್ದರು. ಕೆಸರು ಹಾಗೂ ಅವಶೇಷ ತೆಗೆಯುತ್ತಿದ್ದ ಭಾರಿ ಯಂತ್ರಗಳನ್ನು ಕೂಡ ಹೊರ ತೆಗೆಯಲಾಗಿತ್ತು.