Tuesday, July 5, 2022

Latest Posts

ಉತ್ತರಾಖಂಡದಲ್ಲಿ ಹಿಮಸ್ಫೋಟ: ಮೃತರ ಸಂಖ್ಯೆ 51ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಉತ್ತರಾಖಂಡದಲ್ಲಿ ಸಂಭವಿಸಿದ ಹಿಮಕುಸಿತದಿಂದಾಗಿ ಧೌಲಿಗಂಗಾ ನದಿಯಲ್ಲಿ ಉಂಟಾದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ತಪೋವನ ಸುರಂಗ ಮತ್ತು ರೈನಿ ವಿದ್ಯುತ್ ಯೋಜನೆ ಸ್ಥಳದಿಂದ ನಿನ್ನೆ ಮತ್ತೆ 12 ಮೃತದೇಹಗಳನ್ನ ಹೊರತೆಗೆಯಲಾಗಿದೆ.

ಇದರೊಂದಿಗೆ ಈವರೆಗೆ ಸಿಕ್ಕ ಮೃತ ದೇಹಗಳ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಈ ಪೈಕಿ 24 ಜನರನ್ನು ಮಾತ್ರ ಗುರುತಿಸಲಾಗಿದೆ.

ತಪೋವನ್​ನಲ್ಲಿ ಎನ್​ಟಿಪಿಸಿಯಿಂದ 520 ಮೆಗಾ ವ್ಯಾಟ್​ನ ಬೃಹತ್ ವಿದ್ಯುತ್ ಯೋಜನೆ ನಡೆಯುತ್ತಿತ್ತು. ಎಲ್ಲವೂ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ಇಲ್ಲಿ ಮಡುಗಟ್ಟಿರುವ ಕೆಸರನ್ನ ಹೊರಗೆಳೆಯುವಾಗ ನಿನ್ನೆ ಹಲವು ಶವಗಳು ಸಿಕ್ಕಿವೆ.

ಅಲ್ಲಿ ಇನ್ನೂ 39 ಮಂದಿ ಸಿಲುಕಿರುವ ಶಂಕೆ ಇದ್ದು, ಕೆಸರು ಸಂಪೂರ್ಣವಾಗಿ ಹೊರಹಾಕಿದ ಬಳಿಕ ಚಿತ್ರಣ ಸ್ಪಷ್ಟವಾಗಲಿದೆ. ಸುರಂಗದ ಮೊದಲ 125 ಮೀಟರ್​ನಷ್ಟು ದೂರದ ಪ್ರದೇಶದಲ್ಲಿ ಜೆಸಿಬಿ ಮೂಲಕ ಕೆಸರು ಹೊರಹಾಕಲಾಗಿದೆ. ಆದರೆ ಆ ಬಳಿಕ ಸುರಂಗ ಕಿರಿದಾಗುತ್ತಿರುವುದರಿಂದ ಸಣ್ಣ ಯಂತ್ರಗಳ ಮೂಲಕ ಕೆಸರು ಹೊರಹಾಕಲಾಗುತ್ತಿದೆ. ಹೀಗಾಗಿ ಈ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss