Monday, July 4, 2022

Latest Posts

ಉತ್ತರಾಖಂಡದಲ್ಲಿ ಹಿಮಸ್ಫೋಟ: ಪ್ರಧಾನಿ ಮೋದಿ, ಅಮಿತ್ ಶಾ ಅವರಿಂದ ಪರಿಸ್ಥಿತಿ ಅವಲೋಕನ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಉತ್ತರಾಖಂಡದಲ್ಲಿ ಸಂಭವಿಸಿರುವ ಹಿಮಸ್ಫೋಟದಿಂದಾಗಿ ಉಂಟಾಗಿರುವ ಭಾರೀ ಪ್ರವಾಹಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ,ಗೃಹ ಸಚಿವ ಅಮಿತ್ ಶಾ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.
ಉತ್ತರಾಖಂಡಕ್ಕೆ ಹೆಚ್ಚುವರಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ರವಾನೆ ಮಾಡಿರುವುದಾಗಿ ಅಮಿತ್ ಶಾ ಹೇಳಿದ್ದಾರೆ.
ಇನ್ನು ಹಿಮಪಾತ ಉಂಟಾಗಿರುವ ಹಿನ್ನೆಲೆಯಲ್ಲಿ ಕಣಿವೆ ಪ್ರದೇಶದ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದೆ. ರೆನಿ ಗ್ರಾಮದ ಸಮೀಪ ಧೌಲಿಗಂಗಾ ಹಾಗೂ ಜೋಶಿಮಠ ಪ್ರದೇಶದಲ್ಲಿ ವ್ಯಾಪಕ ಪ್ರವಾಹದ ಸ್ಥಿತಿ ಉಂಟಾಗಿದೆ. ಪರಿಣಾಮ ಇಲ್ಲಿ 150ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಉತ್ತರಾಖಂಡಕ್ಕೆ ಹೆಚ್ಚುವರಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ರವಾನೆ ಮಾಡಲಾಗಿದೆ ಎಂದಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ಅವರ ಬಳಿ ಮಾಹಿತಿ ಪಡೆದಿದ್ದೇನೆ. ಅವರು ಐಟಿಬಿಪಿ ಡಿಜಿ ಮತ್ತು ಎನ್‌ಡಿಆರ್‌ಎಫ್ ಡಿಜಿ ಜೊತೆ ಮಾತನಾಡಿದ್ದಾರೆ. ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಸಂತ್ರಸ್ತರ ಪ್ರಾಣ ಉಳಿಸಲು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ದೇವಭೂಮಿ ರಕ್ಷಣೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss