ಹೊಸದಿಗಂತ ಆನ್ ಲೈನ್ ಡೆಸ್ಕ್:
ಉತ್ತರಾಖಂಡದಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪಾತವಾಗಿರುವ ಹಿನ್ನೆಲೆಯಲ್ಲಿ ತಪೋವನದಲ್ಲಿ ಹಿಮದ ಬಂಡೆಯ ಒಂದು ಭಾಗ ಬೆಟ್ಟದಿಂದ ಮುರಿದು ಋಷಿಗಂಗಾ ಹೈಡ್ರೋ ಪವರ್ ಪ್ರಾಜೆಕ್ಟ್ ಮೇಲೆ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಇದರಿಂದ ನದಿಯ ಹರಿವು ಹೆಚ್ಚಾಗಿದ್ದು, ಧಿಡೀರ್ ಪ್ರವಾಹ ಉಂಟಾಗಿದೆ. ಈ ಕುರಿತು ಸಿಎಂ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಉತ್ತರಾಖಂಡ್ನ ಚಮೋಲಿ ಜಿಲ್ಲೆಯಲ್ಲಿ ಹಿಮದ ಬಂಡೆ ಕುಸಿದು ಪ್ರವಾಹ ಉಂಟಾಗಿದೆ ಎಂದು ವರದಿಯಾಗಿದೆ. ಘಟನೆಯ ದೃಶ್ಯಾವಳಿಗಳನ್ನು ನೋಡಲು ಕಷ್ಟವಾಗುತ್ತಿದೆ, ಘಟನೆಯಲ್ಲಿ ಹಲವಾರು ಜನರು ಕಾಣೆಯಾಗಿದ್ದಾರೆ. ಸಂತ್ರಸ್ತರು ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.