ಹೊಸದಿಗಂತ ಆನ್ ಲೈನ್ ಡೆಸ್ಕ್:
ಉತ್ತರಾಖಂಡದಲ್ಲಿ ನಿನ್ನೆ ಸಂಭವಿಸಿದ ಹಿಮ ಸ್ಫೋಟಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಇಂದು ಅಲ್ಲಿನ ಸಂಸದರ ಜೊತೆ ಮಹತ್ವದ ಸಭೆ ನಡೆಸಿದರು.
ಈ ವೇಳೆ ದುರಂತದ ಕುರಿತು ಪರಿಹಾರ ಕಾರ್ಯಗಳು ಮತ್ತು ಭವಿಷ್ಯದ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದರು.ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಚರ್ಚೆಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಮಂತ್ರಿ ಅಮಿತ್ ಶಾ ಕೂಡ ಭಾಗಿಯಾಗಿದ್ದರು.
ದುರಂತದ ನಂತರ ಪ್ರಧಾನಿ ಮೋದಿ ನಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಮತ್ತು ಉತ್ತರಾಖಂಡಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಭರವಸೆ ನೀಡಿದ್ದಾರೆ ಎಂದು ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ತಿಳಿಸಿದ್ದಾರೆ.