ಹೊಸ ದಿಗಂತ ಆನ್ ಲೈನ್ ಡೆಸ್ಕ್:
ದೇಶದೆಲ್ಲೆಡೆ ಹಕ್ಕಿ ಜ್ವರ ಭೀತಿ ಹೆಚ್ಚಾಗುತ್ತಿದ್ದಂತೆ ಉತ್ತರಾಖಂಡದಲ್ಲೂ ರೋಗ ಪತ್ತೆಯಾಗಿದ್ದು, ರಾಜ್ಯದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಎರಡು ಸತ್ತ ಕಾಗೆಗಳ ಮಾದರಿಗಳನ್ನು ಭೋಪಾಲ್ನ ಲ್ಯಾಬ್ಗೆ ಕಳುಹಿಸಲಾಗಿತ್ತು,ಇವುಗಳಲ್ಲಿ ಹಕ್ಕಿ ಜ್ವರದ ಸೋಂಕು ತಗುಲಿದ್ದು ಪತ್ತೆಯಾಗಿದೆ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಉತ್ತರಾಖಂಡದಲ್ಲಿ ಹಕ್ಕಿ ಜ್ವರ ದೃಢಪಟ್ಟ ಹಿನ್ನೆಲೆ ನೆರೆಯ ರಾಜ್ಯಗಳಾದ ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಉತ್ತರಪ್ರದೇಶದಿಂದ ಕೋಳಿ ಮತ್ತು ಮೊಟ್ಟೆಗಳನ್ನು ಆಮದು ಮಾಡಿಕೊಳ್ಳುವ ಬಗ್ಗೆ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಾಜ್ಯ ಪಶುಸಂಗೋಪನಾ ಸಚಿವೆ ರೇಖಾ ಆರ್ಯ ಹೇಳಿದ್ದಾರೆ.
ಇನ್ನು ಸತ್ತ ಪಕ್ಷಿಗಳ ಮಾದರಿಗಳನ್ನು ಸಂಗ್ರಹಿಸುವಲ್ಲಿ ಅಥವಾ ಅವುಗಳನ್ನು ಹೂತುಹಾಕುವಲ್ಲಿ ತೊಡಗಿರುವ ಅರಣ್ಯ ಸಿಬ್ಬಂದಿ ಪಿಪಿಇ ಕಿಟ್ಗಳನ್ನು ಧರಿಸದೆಯೇ ಆ ಕೆಲಸವನ್ನು ಮಾಡದಂತೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.