Friday, August 19, 2022

Latest Posts

ಉತ್ತರ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಂಗಳವಾರ 159 ಕೊರೋನಾ ಪ್ರಕರಣಗಳು ಪತ್ತೆ

ಹುಬ್ಬಳ್ಳಿ: ಉತ್ತರ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಂಗಳವಾರ 159 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ಮೃತಪಟ್ಟಿದ್ದಾನೆ. ಕಲ್ಯಾಣ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿವೆ. ಕಲಬುರಗಿ, ಬಳ್ಳಾರಿ, ಯಾದಗಿರಿ, ರಾಯಚೂರುನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿವೆ. ಮಂಗಳವಾರ ಕಲಬುರಗಿ 63, ಬಳ್ಳಾರಿ 53, ಧಾರವಾಡ 8, ಯಾದಗಿರಿ 6, ಉತ್ತರ ಕನ್ನಡ 6, ರಾಯಚೂರು 6, ವಿಜಯಪುರ 4, ಗದಗ 4, ಕೊಪ್ಪಳ 4, ಬೆಳಗಾವಿ 3, ಬೀದರ 2 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.
ಗ್ರಾಮೀಣ ಭಾಗಕ್ಕೂ ಕಾಲಿಟ್ಟ ಕೊರೋನಾ : ಧಾರವಾಡ ಜಿಲ್ಲೆಯ ನಂತರ ಉತ್ತರ ಕನ್ನಡ ಜಿಲ್ಲೆಯಲ್ಲೂ ಗ್ರಾಮೀಣ ಭಾಗಕ್ಕೆ ಕೊರೋನಾ ಕಾಲಿಟ್ಟಿದೆ. ಭಟ್ಕಳ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಷ್ಟೇ ಕಾಣಿಸಿಕೊಂಡಿದ್ದ ಕೊರೋನಾ ಸೋಂಕು ಮಂಗಳವಾರ ತಾಲೂಕಿನ ಗ್ರಾಮೀಣ ಭಾಗಕ್ಕೂ ಹರಡಿದೆ. ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ನಲ್ಲಿದ್ದ ತಾಲೂಕಿನ ತೆರ್ನಮಕ್ಕಿ ಗ್ರಾಮದಲ್ಲಿನ ವ್ಯಕ್ತಿಯೊಬ್ಬರಲ್ಲಿ ಕೋವಿಡ್ – 19 ಸೋಂಕು ದೃಢಪಟ್ಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!