ಜಮ್ಮು ಕಾಶ್ಮೀರ: ಗುರುವಾರ ಬೆಳ್ಳಂ ಬೆಳಗ್ಗೆ ಬಾರಮುಲ್ಲಾ ಜಿಲ್ಲೆಯ ಸೊಪೋರ್ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಎನ್ ಕೌಂಟರ್ ನಡೆದಿದೆ.
ಈ ಕುರಿತು ಜಮ್ಮು ಕಾಶ್ಮೀರ ಪೊಲೀಸರಿಂದ ಮಾಹಿತಿ ಪಡೆದ ನಂತರ ಸೈನ್ಯ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ.
ಭಾರತೀಯ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ಸಂಭವಿಸಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿ ತಿಳಿಸಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.