ಲಖನೌ: ದೇಶಾದ್ಯಂತ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ರಾಜ್ಯದಲ್ಲಿ ಜೂನ್ 30ರವರೆಗೆ ರಾಜ್ಯದಲ್ಲಿ ಯಾವುದೇ ಸಾರ್ವಜನಿಕ ಸಭೆ ಅಥವಾ ಸಮಾವೇಶಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ 1621 ಮಂದಿ ಸೋಂಕಿತರು ದಾಖಲಾಗಿದ್ದು, 247 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 25 ಮಂದಿ ಸೋಂಕಿತರು ಬಲಿಯಾಗಿದ್ದಾರೆ.
ಈ ಹಿನ್ನಲೆ ರಾಜ್ಯದಲ್ಲಿ ಯಾವುದೇ ಸಾರ್ವಜನಿಕ ಕೂಟ, ಸಭೆ, ಸಮಾವೇಶಕ್ಕೆ ಅವಕಾಶ ನೀಡಬಾರದು. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣ ನಿಯಂತ್ರಣಕ್ಕೆ ಬಂದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.