Sunday, June 26, 2022

Latest Posts

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಆರು ಮಕ್ಕಳು ಸೇರಿ 14 ಮಂದಿ ಸ್ಥಳದಲ್ಲೇ ಸಾವು

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟ್ರಕ್ ಹಾಗೂ ಕಾರಿನ ನಡುವೆ  ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಮಕ್ಕಳು ಸೇರಿ 14 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶ ರಾಜ್ಯದ ಪ್ರತಾಪ್ ಗಢ್ ನಲ್ಲಿ ನಡೆದಿದೆ.

ಗುರುವಾರ ರಾತ್ರಿ 11.45ರ ಸುಮಾರಿಗೆ ಈ ಅಪಘಾತ ನಡೆದಿದ್ದು, ಪ್ರಯಾಗ್ ರಾಜ್- ಲಕ್ನೋ ಹೆದ್ದಾರಿಯ ದೇಶರಾಜ್ ಇನಾರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. 6 ಮಕ್ಕಳು ಸೇರಿ 14 ಮಂದಿ ಸ್ಥಳದಲ್ಲೇ ಮೃತಪಟ್ಟದ್ದಾರೆ. ಹಲವು ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಾಧ್ಯವಾದ ಎಲ್ಲಾ ನೆರವು ನೀಡುವಂತೆ ಆದೇಶ ನೀಡಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss