Sunday, June 26, 2022

Latest Posts

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನ: ಪೇಜಾವರ ಶ್ರೀ ಕಂಬನಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆಮಾಸ್ಕ್ ಧರಿಸಿಸಾಮಾಜಿಕ ಅಂತರ ಕಾಯ್ದುಕೊಳ್ಳಿಕೈಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿನೀವೂ ಸುರಕ್ಷಿತರಾಗಿರಿನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ ಉಡುಪಿ:

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಕಲ್ಯಾಣ್ ಸಿಂಗ್ ನಿಧನಕ್ಕೆ ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಶೋಕ ಸಂದೇಶ ನೀಡಿರುವ ಅವರು, ಅಯೋಧ್ಯಾ ಶ್ರೀರಾಮ ಜನ್ಮಭೂಮಿ ಆಂದೋಲನದಲ್ಲಿ ಸದಾ ಸ್ಮರಣೀಯ ಪಾತ್ರ ವಹಿಸಿದ್ದ ಹಿರಿಯ ಮುತ್ಸದ್ಧಿ ಕಲ್ಯಾಣ್ ಸಿಂಗ್ ನಿಧನದಿಂದ ವಿಷಾದವಾಗಿದೆ. ಹಿಂದು ಸಿದ್ಧಾಂತಕ್ಕೆ ಬದ್ಧರಾಗಿದ್ದ ಅವರು, ನಮ್ಮ ಗುರುಗಳಾದ ಶ್ರೀವಿಶ್ವೇಶತೀರ್ಥ ಶ್ರೀಪಾದರೊಂದಿಗೂ ವಿಶೇಷ ಆತ್ಮೀಯ ಬಾಂಧವ್ಯ ಹೊಂದಿದ್ದರು.
ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತವಾಗಲಿ ಎಂದು ನಮ್ಮ ಆರಾಧ್ಯಮೂರ್ತಿ ಅಯೋಧ್ಯಾಪತಿ ಶ್ರೀರಾಮಚಂದ್ರ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಅಯೋಧ್ಯಾ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿಶ್ವಸ್ಥರೂ ಆಗಿರುವ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss