ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉತ್ತರ ಪ್ರದೇಶ| 8 ಮಂದಿ ಪೊಲೀಸರನ್ನು ಬಲಿ ಪಡೆದ ಕ್ರಿಮಿನಲ್ಸ್ ಗಳು

ಲಖನೌ: ಉತ್ತರಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ಮುಂಜಾನೆ ನಡೆದ ಅಪರಾಧಿಗಳ ಮೇಲೆ ನಡೆದ ದಾಳಿಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಮೂವರು ಸಬ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ 8 ಮಂದಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯದ ಹಿರಿಯ ಸರ್ಕಾರಿ ಅಧಿಕಾರಿ ತಿಳಿಸಿದ್ದಾರೆ.

ಕಾನ್ಪುರ ಜಿಲ್ಲೆಯ ಚೌಬೆಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಕ್ರು ಗ್ರಾಮದಲ್ಲಿ ಅಪರಾಧಿಯನ್ನು ಹುಡುಕಲು ಪೊಲೀಸರು ತೆರಳಿದ್ದರು, ಅಲ್ಲಿ ಕ್ರಮಿನಲ್ಸ್ ಹಾಗೂ ಪೊಲೀಸರ ನಡುವೆ ಗುಂಡಿನ ದಾಳಿ ನಡೆದಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ವಿಕಾಸ್ ದುಬೆ ವಿರುದ್ಧ ರಾಹುಲ್ ತಿವಾರಿ ಎಂಬ ವ್ಯಕ್ತಿ ಕೊಲೆ ಯತ್ನದ ಪ್ರಕರಣ ದಾಖಲಿಸಿದ್ದರು. ಈ ನಿಟ್ಟಿನಲ್ಲಿ ಪೊಲೀಸ್ ತಂಡವು ಸ್ಥಳಕ್ಕೆ ದಾವಿಸುತ್ತಿದ್ದಂತೆಯೇ ರಸ್ತೆಯನ್ನು ಬಂದ್ ಮಾಡಿದ ಕ್ರಿಮಿನಲ್ಸ್ ಗಳು ಮೇಲ್ಚಾವಣಿಯಿಂದ ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸತೊಡಗಿದ್ದರು.

ಶಿವರಾಜ್‌ಪುರದ ಸ್ಟೇಷನ್ ಅಧಿಕಾರಿ ಆಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ಸಬ್ ಇನ್ಸ್‌ಪೆಕ್ಟರ್ ಮಹೇಶ್ ಯಾದವ್ ಮತ್ತು ಕಾನ್‌ಸ್ಟೆಬಲ್‌ಗಳಾದ ಸುಲ್ತಾನ್ ಸಿಂಗ್, ರಾಹುಲ್, ಜಿತೇಂದ್ರ ಮತ್ತು ಬಾಬ್ಲೂ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ.

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ತವ್ಯದಲ್ಲಿ ಮೃತಪಟ್ಟ ಎಂಟು ಪೊಲೀಸ್ ಸಿಬ್ಬಂದಿಗೆ ಗೌರವ ಸಲ್ಲಿಸಿದ್ದಾರೆ ಮತ್ತು ಗುಂಡಿನ ದಾಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss