ಹೊಸದಿಗಂತ ವರದಿ ಮಂಗಳೂರು:
ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಿಗೆ, ಉದ್ದಿಮೆ ಪರವಾನಿಗೆ ಇಲ್ಲದೆ ಮತ್ತು ಉದ್ದಿಮೆ ಪರವಾನಿಗೆ ನವೀಕರಿಸದೇ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವವರಿಗೆ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಹಾಗೂ ಮೇಯರ್ ದಿವಾಕರ ಪಾಂಡೇಶ್ವರ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪಾಲಿಕೆ ಆಯುಕ್ತರು, ಮೇಯರ್ ಹಾಗೂ ಅಧಿಕಾರಿಗಳ ತಂಡ ಭಾನುವಾರ ಬೆಳಗ್ಗೆ ನಗರದ ಹಲವು ಅಂಗಡಿಗಳಿಗೆ ದಿಢೀರ್ ದಾಳಿ ನಡೆಸಿತು.
ಹಲವು ಮಂದಿ ಪರವಾನಿಗೆ ಇಲ್ಲದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದು,
ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಹಲವಾರು ಕಟ್ಟಡಗಳ ದಾಖಲೆಗಳನ್ನು ಪರಿಶೀಲಿಸಿದ ಮೇಯರ್ ದಿವಾಕರ ಅವರು ಅನಧಿಕೃತ ಕಟ್ಟಡಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.