Monday, July 4, 2022

Latest Posts

ಉದ್ಧಟತನದ ಮಾತನಾಡಬೇಡಿ, ಮಹಾಜನ್ ವರದಿಯೇ ಅಂತಿಮ: ಠಾಕ್ರೆ ವಿರುದ್ಧ ಸಿಎಂ ಗರಂ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಣಿ ಟ್ವೀಟ್ ಮೂಲಕ ಮಹಾರಾಷ್ಟ್ರ ಸಿಎಂ ವಿರುದ್ಧ ಹರಿಯಾಯ್ದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದಿದ್ದಾರೆ.

ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ ಎಂದರು.

ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss