Monday, August 8, 2022

Latest Posts

ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣ: ಹೈಕೋರ್ಟಿನಲ್ಲಿ ನಿರಂಜನ ಭಟ್‌ನ ಜಾಮೀನು ಅರ್ಜಿ ತಿರಸ್ಕಾರ

ಉಡುಪಿ: ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆಯ ಆರೋಪಿಗಳಲ್ಲೊಬ್ಬನಾದ, ಸ್ವಯಂಘೋಷಿತ ಜ್ಯೋತಿಷಿ ನಿರಂಜನ ಭಟ್‌ನ ಜಾಮೀನು ಅರ್ಜಿ ಹೈಕೋರ್ಟಿನಲ್ಲಿ ತಿರಸ್ಕೃತಗೊಂಡಿದೆ.
2016ರ ಜು. 28ರಂದು ಭಾಸ್ಕರ ಶೆಟ್ಟಿ ಅವರನ್ನು ಇಂದ್ರಾಳಿಯ ಅವರ ಮನೆಯಲ್ಲಿ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹತ್ಯೆ ಮಾಡಿದ್ದರು. ನಂತರ ನಿರಂಜನ ಭಟ್ ಶವವನ್ನು ಕಾರ್ಕಳ ತಾಲೂಕಿನ ಬೆಳ್ಮಣ್‌ನಲ್ಲಿರುವ ತನ್ನ ಮನೆಯಲ್ಲಿ ಯಾಗಕುಂಡದಲ್ಲಿ ಹಾಕಿ ಸುಟ್ಟು ಹಾಕಿದ್ದ.
ಅನಾರೋಗ್ಯದ ನೆಪದಲ್ಲಿ ರಾಜೇಶ್ವರಿ ಶೆಟ್ಟಿ ಈಗಾಗಲೇ ಹೈಕೋರ್ಟಿನ ಜಾಮೀನಿನ ಮೇಲೆ ಹೊರಗಿದ್ದಾಳೆ. ನವನೀತ್ ಶೆಟ್ಟಿ ಮತ್ತು ನಿರಂಜನ ಭಟ್ ಜಾಮೀನು ಸಿಗದೇ ಜೈಲಿನಲ್ಲಿದ್ದಾರೆ.
ಜೂನ್ ತಿಂಗಳಲ್ಲಿ ಭಟ್‌ನ ತಂದೆ ನಿಧನರಾದ ಹಿನ್ನೆಲೆಯಲ್ಲಿ ನಿರಂಜನ ಭಟ್‌ನಿಗೆ 15 ದಿನ ಕಾಲ ತಾತ್ಕಾಲಿಕ ಜಾಮೀನು ಸಿಕ್ಕಿತ್ತು. 2019ರಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯ ಆತನ ಜಾಮೀನು ತಿರಸ್ಕರಿಸಿತ್ತು, ಇದೀಗ ಹೈಕೋರ್ಟ್ ಕೂಡ ಜಾಮೀನು ನೀಡಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss