Monday, July 4, 2022

Latest Posts

ಉಪಚುನಾವಣೆ ಬಂದೋಬಸ್ತ್ ಕರ್ತವ್ಯದಲ್ಲಿ ಶ್ರಮಿಸುತ್ತಿದ್ದಾರೆ 2,563 ಮಂದಿ ಪೊಲೀಸರು!

ಬೆಂಗಳೂರು: ರಾಜ್ಯದಾದ್ಯಂತ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಉಪಚುನಾವಣೆ ಬಂದೋಬಸ್ತ್ ಕರ್ತವ್ಯದಲ್ಲಿ 2,563 ಮಂದಿ ಪೊಲೀಸರು ಶ್ರಮಿಸುತ್ತಿದ್ದಾರೆ.
ಶಾನಿತುತ ಮತದಾನಕ್ಕಾಗಿ ಆಯಾ ಪೊಲೀಸ್ ವಿಭಾಗಗಳ ಪೊಲೀಸ್ ಆಯುಕ್ತರಿಗೆ (ಡಿಸಿಪಿ) ಭದ್ರತಾ ವ್ಯವಸ್ಥೆ ನಿಯೋಜನೆಯ ಜವಾಬ್ದಾರಿಯನ್ನು ನೀಡಲಾಗಿದೆ. ಸೂಕ್ಷ್ಮ ಮತ್ತು ಅತ್ಯಂತ ಸೂಕ್ಷ್ಮ ಮತದಾನ ಕೇಂದ್ರಗಳು ಇರುವ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಮತದಾನ ಸಂದರ್ಭ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇಡುವಂತೆ ಎಲ್ಲಾ ಡಿಸಿಪಿಗಳು, ಎಸಿಪಿಗಳು ಮತ್ತು ಇನ್ಸ್‌ಪೆಕ್ಟರ್‌ಗಳಿಗೆ ಸೂಚಿಸಲಾಗಿದೆ. ಶಾಂತಿ ಕದಡುವ ಯತ್ನ ನಡೆಸುವ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಳ್ಳಲು ಖಡಕ್ ಸೂಚನೆ ನೀಡಲಾಗಿದೆ.
ರಾಜರಾಜೇಶ್ವರಿ ನಗರ ಉಪಚುನಾವಣೆ ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಇಲ್ಲಿ ಇಂದು  ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss