Saturday, July 2, 2022

Latest Posts

ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಮೃತದೇಹ ರೈಲ್ವೆ ಹಳಿ ಬಳಿ ಪತ್ತೆ!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯ ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರ ಮೃತದೇಹ ರೈಲ್ವೇ ಹಳಿ ಪಕ್ಕ ಪತ್ತೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಡೆತ್‌ನೋಟ್ ಕೂಡ ಸಿಕ್ಕಿದೆ.
ಸೋಮವಾರ ರಾತ್ರಿ ಒಂದು ಗಂಟೆಗೆ ಮನೆಯಿಂದ ತೆರಳಿದ್ದರು ಎನ್ನಲಾಗಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮವಾರ ರಾತ್ರಿ ಖಾಸಗಿ ಡ್ರೈವರ್ ಕರೆದುಕೊಂಡು ಮನೆಯಿಂದ ಸ್ಯಾಂಟ್ರೋ ಕಾರಿನಲ್ಲಿ ತೆರಳಿದ್ದರು. ರಾತ್ರಿಯಾದರೂ ಮನೆಗೆ ವಾಪಸ್ ಬಾರದ ಕಾರಣ ಪೊಲೀಸರು, ಗನ್‌ಮ್ಯಾನ್ ಹುಡುಕಾಟ ನಡೆಸಿದ್ದರು.
ಮಧ್ಯ ರಾತ್ರಿ ವೇಳಗೆ ಅವರ ಮೃತದೇಹ ಗುಣಸಾಗರದ ರೈಲ್ವೇ ಹಳಿ ಬಳಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಮುನ್ನ ಅವರು ಡೆತ್‍ನೋಟ್ ಬರೆದಿಟ್ಟಿದ್ದು, ಇತ್ತೀಚೆಗೆ ವಿಧಾನ ಪರಿಷತ್ತಿನಲ್ಲಿ ತಮ್ಮನ್ನು ಸಭಾಪತಿ ಕುರ್ಚಿಯಿಂದ ಎಳೆದಾಡಿದ ಘಟನೆಯನ್ನು ನಮೂದಿಸಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದ ಕೂಡಲೇ ಶಾಸಕ ಸಿ.ಟಿ.ರವಿ, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಅಕ್ಷಯ್ ಇತರರು ಸ್ಥಳಕ್ಕೆ ಭೇಟಿ ನೀಡಿದ್ದರು. ಧರ್ಮೇಗೌಡ ಅವರ ಮೃತ ದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿಯೇ ಶವಪರೀಕ್ಷೆ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss