Tuesday, June 28, 2022

Latest Posts

ಉಪೇಂದ್ರ ಹುಟ್ಟುಹಬ್ಬಕ್ಕೆ ಕಬ್ಜ ತಂಡದಿಂದ ಉಡುಗೊರೆ, ಅದು ಏನು ಗೊತ್ತಾ? ಇಲ್ಲಿದೆ ಮಾಹಿತಿ

ರಿಯಲ್ ಸ್ಟಾರ್’ ಉಪೇಂದ್ರ ನಾಯಕರಾಗಿ ನಟಿಸುತ್ತಿರುವ, ಆರ್ ಚಂದ್ರು ನಿರ್ದೇಶನದ, ಪ್ಯಾನ್ ಇಂಡಿಯಾ ಸಿನಿಮಾ ’ಕಬ್ಜ’ ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕುತ್ತಿದೆ. ಸೆಪ್ಟೆಂಬರ್ ೧೮ರಂದು ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಡಗರಕ್ಕೆ ’ಕಬ್ಜ’ ಚಿತ್ರತಂಡ ಥೀಮ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಉಡುಗೊರೆ ನೀಡುತ್ತಿದೆ. ಥೀಮ್ ಪೋಸ್ಟರ್ನ್ನು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಸೆಪ್ಟೆಂಬರ್ ೧೭ರ ಸಂಜೆ ೫ ಕ್ಕೆ ಬಿಡುಗಡೆ ಮಾಡಲಿದ್ದಾರೆ. ಬೆಂಗಳೂರು, ಹೈದರಾಬಾದ್ ಮುಂತಾದ ಕಡೆ ನಿರ್ಮಿಸಲಾಗಿದ್ದ, ಅದ್ದೂರಿ ಸೆಟ್ಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಉಪೇಂದ್ರ ಅವರು ಈ ಚಿತ್ರಕ್ಕಾಗಿ ನಾಲ್ಕು ಘಂಟೆಗೂ ಹೆಚ್ಚು ಕಾಲ ವ್ಯಾಯಾಮ ಮಾಡಿ, ಚಿತ್ರೀಕರಣಕ್ಕೆ ಬೇಕಾದ ಹಾಗೆ ಸಜ್ಜಾಗಿ, ಬಹಳ ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಕಬ್ಜ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದ್ದೂರಿತನಕ್ಕೆ ಯಾವುದೇ ಕೊರತೆ ಇಲ್ಲ.ಅಭಿಮಾನಿಗಳ ನಿರೀಕ್ಷೆಗೆ ತಕ್ಕ ಹಾಗೆ ’ಕಬ್ಜ’ ಮೂಡಿಬರುತ್ತಿದೆ ಎನ್ನುತ್ತಾರೆ ಆರ್ ಚಂದ್ರು.

ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ಅವರೇ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ’ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಸಂಗೀತ ನೀಡುತ್ತಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂರ್ಸ ಆಗಿ ರಾಜಶೇರ್ಖ ಕಾರ್ಯನಿರ್ವಹಿಸುತ್ತಿದ್ದಾರೆ. ಎಜೆಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂರ್ಮೋ, ವಿಜಯ್ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಾಮರಾಜನ್(ಐ ಮೂವಿ ಖ್ಯಾತಿ), ಜಗಪತಿ ಬಾಬು, ರಾಹುಲ್ ಜಗತಪ್,ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದ ವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss