ಮಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನ ಆರ್. ಆರ್.ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಉಪ ಚುನಾವಣೆಯ ಮತದಾನ ಆರಂಭವಾಗಿದ್ದು, ಕೋವಿಡ್ ಸುರಕ್ಷತಾ ಕ್ರಮದೊಂದಿಗೆ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಪ್ರಾರಂಭವಾಗಿದೆ.
ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡಲು ಅವಕಾಶ ನೀಡಲಾಗಿದೆ.
ಎರಡು ಕ್ಷೇತ್ರಗಳಿಂದ, ಒಟ್ಟು 1,008 ಬೂತ್ ಗಳನ್ನು ಸ್ಥಾಪಿಸಲಾಗಿದೆ. ಕೋವಿಡ್ ಸುರಕ್ಷತಾ ಕ್ರಮವಾಗಿ ಥರ್ಮಲ್ ಸ್ಕ್ಯಾನರ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಸೋಂಕಿತರು ಸಹ ಸಂಜೆ 5 ರಿಂದ 6 ಗಂಟೆಯ ತನಕ ಮತದಾನ ಮಾಡಬಹುದಾಗಿದೆ.
ಶಿರಾದಲ್ಲಿ 15 ಮತ್ತು ಆರ್.ಆರ್.ನಗರದಲ್ಲಿ 16 ಮಂದಿ ಕಣದಲ್ಲಿದ್ದಾರೆ. ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.