ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಪ ಚುನಾವಣೆ ಫಲಿತಾಂಶ ನಾಳೆ ಪ್ರಕಟ: ಸಂಪುಟ ವಿಸ್ತರಣೆ, ಪುನರ್ರಚನೆ ಬಗ್ಗೆ ಬಿಜೆಪಿಯಲ್ಲಿ ತೀವ್ರ ಕುತೂಹಲ

ಹೊಸದಿಗಂತ ಆನ್ ಲೈನ್ ಡೆಸ್ಕ್:

ನಾಳೆ ರಾಜ್ಯದಲ್ಲಿ ತೀವ್ರ ಕುತೂಹಲದಿಂದ ಕಾಯುತ್ತಿದ್ದ ರಾಜ್ಯದ ರಾಜಧಾನಿ ಬೆಂಗಳೂರಿನ ಆರ್.ಆರ್.ನಗರ ಮತ್ತು ಶಿರಾ ಕ್ಷೇತ್ರ ಹಾಗೂ ಬಿಹಾರ ಚುನಾವಣೆ ಫಲಿತಾಂಶ ಹೊರ ಬೀಳಲಿದೆ.

ಉಪ ಚುನಾವಣೆ ನಂತರವೇ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಬಗ್ಗೆ ಚರ್ಚೆ ನಡೆಯಲಿದೆ, ಸಿಎಂ ಬಿ.ಎಸ್. ಯಡಿಯೂರಪ್ಪ ಮುಂದಿರುವ ಪ್ರಮುಖ ಆಧ್ಯತೆ ಕೂಡ ಇದೆ ಆಗಿದೆ. ಹಾಗಾಗಿ ಬಿಜೆಪಿಯಲ್ಲಿ ಈ ಬಗ್ಗೆ ತೀವ್ರ ಚರ್ಚೆ, ಕುತೂಹಲ ಹೆಚ್ಚಿದೆ

ಸೆಪ್ಟೆಂಬರ್ ನಲ್ಲಿ ರಾಜ್ಯದ ಸಿಎಂ ದೆಹಲಿಯಲ್ಲಿ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ನೊಂದಿಗೆ  ಚರ್ಚೆ ನಡೆಸಿದ್ದರು. ಆದರೆ ಒಪ್ಪಿಗೆ ಸಿಕ್ಕಿರಲಿಲ್ಲ.  ಬಿಹಾರ ಚುನಾವಣೆ, ನಮ್ಮ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆಗಳು ಬಂದವು. ಇದೀಗ ನಾಳೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.  ಸಂಪುಟ ವಿಸ್ತರಣೆ ಬಗ್ಗೆ ಏನು ತೀರ್ಮಾನ ಕೈಗೊಳ್ಳುತ್ತದೆ ಹೈಕಮಾಂಡ್ ಎಂದು ಕಾದು ನೋಡಬೇಕಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss