ಉಫ್ ಎಂಥಾ ಸೆಕೆ ಮಾರಾಯರೇ: ದಕ್ಷಿಣ ಕನ್ನಡದ ವಿವಿಧ ಪ್ರದೇಶಗಳಲ್ಲಿ 40 ಡಿಗ್ರಿ ದಾಟಿದ ಉಷ್ಣಾಂಶ

0
103
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್ ಗೂ ಅಧಿಕ ಉಷ್ಣಾಂಶ ದಾಖಲಾಗಿದೆ.
ಬೆಳ್ತಂಗಡಿ, ಪುತ್ತೂರು, ಬಂಟ್ವಾಳದ ಕೆಲವು ಪ್ರದೇಶಗಳಲ್ಲಿ 41- 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವುದು ಹವಾಮಾನ ವೆಬ್ ಸೈಟ್ ಗಳಲ್ಲಿ ಪ್ರಕಟವಾಗಿದೆ. ಆದರೆ ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಆಗಿತ್ತು.‌ ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಪಣಂಬೂರು ಪ್ರದೇಶದಲ್ಲಿ ಬುಧವಾರ ಗರಿಷ್ಠ 35.5 ಹಾಗೂ ಕನಿಷ್ಠ 26.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು.

LEAVE A REPLY

Please enter your comment!
Please enter your name here