Thursday, July 7, 2022

Latest Posts

ಉಳ್ಳಾಲ‌ ವಿಧಾನಸಭಾ ಕ್ಷೇತ್ರದ ಜನರೂ ನಮ್ಮವರೇ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವತಿಯಿಂದ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಉಳ್ಳಾಲ‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರ ಮೂಲಕ 5 ಟನ್ ಅಕ್ಕಿಯನ್ನು ಅಲ್ಲಿನ ಬಿಜೆಪಿ ಅಧ್ಯಕ್ಷರ ಕೈಗೆ  ಹಸ್ತಾಂತರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ವಿಧಾನಸಭಾ ಕ್ಷೇತ್ರಗಳ ಪೈಕಿ 7ರಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಗೆದ್ದ ಶಾಸಕರಿದ್ದೇವೆ. ಹಾಗೂ ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಲಿನ ಮುಖಂಡರಾದ ಚಂದ್ರಹಾಸ್ ಪಂಡಿತ್ ಹೌಸ್,  ಸಂತೋಷ್ ರೈ ಬೋಳಿಯಾರು ಹಾಗೂ ನಮ್ಮ ಕಾರ್ಯಕರ್ತರು ಅಲ್ಲಿನ ಜನರಿಗಾಗಿ ಅವಿರತವಾಗಿ ದುಡಿಯುತ್ತಿದ್ದಾರೆ. ಅವರಿಗೆ ನೈತಿಕ ಬಲ ತುಂಬುವ ನಿಟ್ಟಿನಲ್ಲಿ  ಅವರೊಂದಿಗೆ ಸದಾ ನಾವಿರುತ್ತೇವೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಸದ್ಯ 5 ಟನ್ ಅಕ್ಕಿಯನ್ನು ಕಳುಹಿಸಲಾಗಿದೆ. ಕಾರಣಾಂತರಗಳಿಂದ ಲಾಕ್ ಡೌನ್ ಮುಂದುವರಿದರೆ ಉಳ್ಳಾಲ ವಿಧಾನಸಭಾ ಕ್ಷೇತ್ರದ ಜನರಿಗೆ ಮತ್ತಷ್ಟು ಸಹಾಯ ಒದಗಿಸಲು ಸಿದ್ಧರಾಗಿದ್ದೇವೆ. ಕ್ಷೇತ್ರ ಬೇರೆಯದೇ ಆದರೂ ಅಲ್ಲಿನ ಜನರು ನಮ್ಮವರೇ ಎನ್ನುವ ಭಾವನೆ ನಮ್ಮದು. ಹಾಗಾಗಿ ಅಲ್ಲಿನ ಜನರೊಂದಿಗೆ ಸದಾ ನಾವಿರುತ್ತೇವೆ ಎಂದು ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ದಿವಾಕರ್ ಪಾಂಡೇಶ್ವರ,ಬಿಜೆಪಿ ಮಂಗಳೂರು ನಗರ ದಕ್ಷಿಣ ಅದ್ಯಕ್ಷ ವಿಜಯ್ ಕುಮಾರ್ ಶೆಟ್ಟಿ,ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರು, ಬಿಜೆಪಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ಅದ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಪ್ರಧಾನ ಕಾರ್ಯದರ್ಶಿ ರೂಪಾ ಡಿ ಬಂಗೇರ, ಜೆ. ಸುರೇಂದ್ರ, ಬಿಜೆಪಿ ಮುಖಂಡರಾದ ರಮೇಶ್ ಕಂಡೆಟ್ಟು, ಭಾಸ್ಕರ್ ಚಂದ್ರ ಶೆಟ್ಟಿ, ಅನಿಲ್ ಅತ್ತಾವರ, ಆರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಪೂರ್ಣಿಮಾ ಮುಂತಾದವರು ಉಪಸ್ಥಿತರಿದ್ದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss