Wednesday, July 6, 2022

Latest Posts

ಉ.ಕ ಜಿಲ್ಲೆಯಲ್ಲಿ ಪ್ರವಾಹದ ಭೀತಿ: ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಕಾರವಾರ : ವ್ಯಾಪಕ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ನದಿಗಳು ಉಕ್ಕೇರುತ್ತಿದ್ದು ಭಾನುವಾರ ಕದ್ರಾ ಜಲಾಶಯದಿಂದ ೨೭೨೦೦ ಕ್ಯೂಸೆಕ್ ನೀರನ್ನು ಬಿಡಲಾಗಿದೆ.
ಇದರಿಂದಾಗಿ ಕಾಳಿನದಿ ತೀರದ ಇಕ್ಕೆಲಗಳಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಇದುವರೆಗೂ ಕದ್ರಾ ಜಲಾಶಯದಿಂದ ೪೭೨೦೦ ಕ್ಯೂಸೆಕ್ ನೀರನ್ನು ಬಿಡಲಾಗಿದೆ. ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮತ್ತೊಮ್ಮೆ ನೀರು ಬಿಡುವ ಸಾಧ್ಯತೆಯ ಬಗ್ಗೆ ಅಧಿಕಾರಿಗಳು ನದಿ ಪಾತ್ರದ ಜನರಿಗೆ ಸೂಚನೆ ನೀಡಿದ್ದು, ಯಾವುದೇ ಸಂದರ್ಭದಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳಲು ಸಿದ್ಧವಾಗುವಂತೆ ಮನವಿ ಮಾಡಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೇಡ್ತಿ – ಗಂಗಾವಳಿ ನದಿಯಲ್ಲೂ ನೀರಿನ ಪ್ರಮಾಣ ಏರತೊಡಗಿದೆ. ಕೆಲ ದಿನಗಳ ಹಿಂದೆ ನೆರೆಯಲ್ಲಿ ಮಿಂದೆದ್ದ ಅಂಕೋಲಾದ ಗಂಗಾವಳಿ ನದಿ ಪಾತ್ರದ ಜನರಲ್ಲಿ ಮತ್ತೆ ತಲ್ಲಣ ಶುರುವಾಗಿದೆ. ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ವ್ಯಾಪಕ ಮಳೆ ದಾಖಲಾಗಿದೆ. ಘಟ್ಟದ ಮೇಲೆ ವರದಾ ನದಿಯೂ ಉಕ್ಕೇರತೊಡಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss