Wednesday, June 29, 2022

Latest Posts

ಎಂದಿನಂತಿಲ್ಲ ಈ ಬಾರಿಯ ಗಣರಾಜ್ಯೋತ್ಸವ ಸಂಭ್ರಮ: ಸಾರ್ವಜನಿಕರಿಗೆ ಪ್ರವೇಶವಿಲ್ಲ!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಈ ಬಾರಿ ಗಣರಾಜ್ಯೋತ್ಸವಕ್ಕೆ ಕೊರೋನಾ ಅಡ್ಡಿಯಾಗಿದೆ. ಬೆಂಗಳೂರಿನಲ್ಲಿ ಪ್ರತಿವರ್ಷ ಸಂಭ್ರಮದಿಂದ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಬಾರಿ ಇರುವುದಿಲ್ಲ. ಜೊತೆಗೆ ಸಾರ್ವಜನಿಕರಿಗೆ ಪ್ರವೇಶವೂ
ಇಲ್ಲ. ಈ ಬಗ್ಗೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಕೊರೋನಾ ಸೋಂಕಿನ ಭೀತಿಯಿಂದಾಗಿ ಈ ಬಾರಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ರದ್ದುಪಡಿಸಲಾಗಿದೆ. ಕೇವಲ 500 ಮಂದಿಗೆ ಮಾತ್ರ ಆಸನ ವ್ಯವಸ್ಥೆ ಇದೆ. ಸಾರ್ವಜನಿಕರಿಗೆ ಪ್ರವೇಶ ಇಲ್ಲ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss