Monday, August 8, 2022

Latest Posts

ಎಐಸಿಸಿ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರಿಕೆ

ನವದೆಹಲಿ :  ಕಾಂಗ್ರೆಸ್ ಅಧಿನಾಯಕಿಯನ್ನು ಕಾಂಗ್ರೆಸ್ ಮುಂಖಡರು ಇದೀಗ ಮನವೊಲಿಸುವಲ್ಲಿ ಸಕ್ಸಸ್ ಆಗಿದ್ದಾರೆ. ಹೀಗಾಗಿ ಎಐಸಿಸಿ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರೆದಿದ್ದಾರೆ.
ಆಗಸ್ಟ್ 10ಕ್ಕೆ ನನ್ನ ಎಐಸಿಸಿ ಆಧ್ಯಕ್ಷೆಯಾಗಿ ಮುಂದುವರಿಕೆ ಅವಧಿ ಮುಕ್ತಾಯಗೊಂಡಿದೆ ಎಂಬುದಾಗಿ ರಾಜೀನಾಮೆ ನೀಡಲು ಸೋನಿಯಾ ಗಾಂಧಿ ಮುಂದಾಗಿದ್ದರು.
ಇಂದು ಮಹತ್ವದ CWC ಸಭೆ ನಡೆಯಿತು. ಗಾಂಧಿ ಕುಟುಂಬದವರೇ ಎಐಸಿಸಿ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂಬುದಾಗಿ ಕೆಲ ಕಾಂಗ್ರೆಸ್ ನಾಯಕರ ಒಂದು ಬಣ ಬೆಂಬಲಿಸಿದ್ರೇ.. ಮತ್ತೆ ಗಾಂಧಿ ಕುಟುಂಬದವರೇತರರು ಎಐಸಿಸಿ ಅಧ್ಯಕ್ಷರಾಗಿ ನೇಮಕಕ್ಕೆ ಬೆಂಬಲ ಸೂಚಿಸಿದ್ದರು.
ಈ ಬಳಿಕ ಸೋನಿಯಾ ಗಾಂಧಿಯವರೇ ಎಐಸಿಸಿ ಹಂಗಾಮಿ ಅಧ್ಯಕ್ಷೆಯಾಗಿ ಮುಂದುವರೆಯುವಂತೆ ಮನವೊಲಿಸಿದ್ದರಿಂದಾಗಿ ಇದೀಗ ಅವರೇ ಮುಂದುವರೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss