ಹೊಸದಿಗಂತ ಆನ್ ಲೈನ್ ಡೆಸ್ಕ್:
ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಡಿ.5ರಂದು ಕರ್ನಾಟಕದ ಬಂದ್ ಮಾಡಲು ಕನ್ನಡಪರ ಸಂಘಟನೆಗಳು ಕರೆ ನೀಡಿದ ಹಿನ್ನಲೆ ರಾಜಧಾನಿ ಬೆಂಗಳೂರಿನಲ್ಲಿ ಬಿಗು ಬಂದೋಬಸ್ತ್ ಗೆ ಕಮಿಷನರ್ ಕಮಲ್ ಪಂತ್ ಸೂಚಿಸಿದ್ದಾರೆ.
ಕರ್ನಾಟಕ ಬಂದ್ ನಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿ.4ರ ಮಧ್ಯರಾತ್ರಿಯಿಂದಲೇ ಪೊಲೀಸರು ಕಾರ್ತವ್ಯಕ್ಕೆ ಹಾಜರಾಗಲಿದ್ದಾರೆ.
ಡಿ.5ರಂದು ಬೆಳಗ್ಗೆ 4.30ಕ್ಕೆ ಹೊಯ್ಸಳ ಪೊಲೀಸರು ಗಸ್ತಿನಲ್ಲಿರಲಿದ್ದು, ಕೆ.ಎಸ್.ಆರ್.ಟಿ.ಸಿ ಮತ್ತು ಬಿಎಂಟಿಸಿ ಡಿಪೋ, ಬಸ್ ನಿಲ್ದಾಣ, ಮೆಟ್ರೋ, ರೈಲ್ವೆ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಬಿಗು ಬಂದೋಬಸ್ತ್ ಗೆ ಸೂಚಿಸಲಾಗಿದೆ.
ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಕಮಿಷನರ್ ಕಮಲ್ ಪಂತ್ ಸೂಚಿಸಿದ್ದಾರೆ.