Monday, July 4, 2022

Latest Posts

ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಕುರಿತು ರೈತರೊಂದಿಗೆ ಇಂದು ಸಚಿವ ರಮೇಶ್ ಜಾರಕಿಹೊಳಿ‌ ಚರ್ಚೆ

ಬೆಂಗಳೂರು: ರಾಜ್ಯ ಸರಕಾರ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆ ಚುರುಕುಗೊಳ್ಳುತ್ತಿದೆ. ಈ ಸಂಬಂಧ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಇಂದು ಯೋಜನೆ ಅನುಷ್ಠಾನಗೊಳ್ಳುತ್ತಿರುವ ಭಾಗದ ರೈತ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಇಂದು ಬೆಳಗ್ಗೆ 11ಗಂಟೆಗೆ ವಿಕಾಸ ಸೌಧದ ಕೊಠಡಿ ಸಂಖ್ಯೆ 318ರಲ್ಲಿ ಸಭೆ ನಡೆಯಲಿದೆ. ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ
ಪ್ರಗತಿ ಪರಿಶೀಲನಾ ಸಭೆ ನಡೆಸಿ, ಎತ್ತಿನಹೊಳೆ ಯೋಜನೆಯ ಕಾಮಗಾರಿಗಳ ಮಾಹಿತಿ ಪಡೆಯಲಿದ್ದಾರೆ.
ನಂತರ ಆ ಯೋಜನಾ ಪ್ರದೇಶಗಳ ಜನಪ್ರತಿನಿಧಿಗಳೊಂದಿಗೂ ಮಹತ್ವದ ಸಭೆ ನಡೆಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss