ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಎತ್ತಿನ ಗಾಡಿಗೆ ಬೈಕ್ ಡಿಕ್ಕಿಯಾದ ಪರಿಣಾಮ, ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೊಟ್ಟುರು ತಾಲೂಕಿನ ಬೆನಕನಹಳ್ಳಿಯಲ್ಲಿ ನಡೆದಿದೆ.
ನಿವೇದಿತಾ(23), ಶಿವಕುಮಾರ್(34) ಮೃತಪಟ್ಟವರು. ಸೋಮವಾರ ಬೆಳಗಿನ ಜಾವ 6ಗಂಟೆಗೆ ಜಗಳೂರು ತಾಲ್ಲೂಕಿನ ಹೊಸಕೆರೆಯಿಂದ- ಸಂಡೂರಿಗೆ ಹೋಗುವ ಮಾರ್ಗ ಮಧ್ಯೆ ಈ ಅಪಘಾತವಾಗಿದೆ.
ದಂಪತಿಗಳು ಹೊರಟಿದ್ದ ಬೈಕ್ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಎತ್ತಿನ ಗಾಡಿಯ ಮುಂಭಾಗದ ಕಬ್ಬಿಣದ ಸಲಾಕೆ ಇಬ್ಬರಿಗೂ ಎದೆಗೆ ಹೊಕ್ಕಿದೆ. ತೀವ್ರ ರಕ್ತಸ್ರಾವವಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಕೊಟ್ಟೂರು ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.