Wednesday, August 17, 2022

Latest Posts

ಎನ್‌ಸಿಪಿ ವರಿಷ್ಠ ಶರದ್‌ ಪವಾರ್‌ ಗೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್!

ಮುಂಬೈ: ಆದಾಯ ತೆರಿಗೆ ಇಲಾಖೆ ಎನ್‌ಸಿಪಿ ವರಿಷ್ಠ ಶರದ್‌ ಪವಾರ್‌ ಅವರಿಗೆ ಮಂಗಳವಾರ ನೋಟಿಸ್‌ ನೀಡಿದೆ .
ಆದಾಯ ತೆರಿಗೆ ಇಲಾಖೆಯ ನೋಟಿಸ್​ ಬಂದಿರುವುದನ್ನು ಸ್ವತಃ ಶರದ್ ಪವಾರ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಚುನಾವಣೆ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್​ ಹಿನ್ನೆಲೆಯಲ್ಲಿ ನೋಟಿಸ್​ ಬಂದಿದ್ದು, ಇಲಾಖೆ ಸ್ಪಷ್ಟನೆ ಹಾಗೂ ವಿವರಣೆ ಕೋರಿದೆ ಎಂದು ಅವರೇ ಸುದ್ದಿಗಾರರಿಗೆ ತಿಳಿಸಿದ್ದಾರೆ.
‘ನನಗೆ ನಿನ್ನೆ ನೋಟಿಸ್‌ ತಲುಪಿದೆ. ‘ಚುನಾವಣಾ ಆಯೋಗದ ನಿರ್ದೇಶನದಂತೆ ಐಟಿ ಇಲಾಖೆ ಈ ನೋಟಿಸ್‌ ನೀಡಿದ್ದು, ಇದಕ್ಕೆ ಉತ್ತರ ನೀಡುತ್ತೇವೆ’ ಎಂದು ಹೇಳಿದರು.
ಶರದ್‌ ಪವಾರ್‌ ಪುತ್ರಿ ಹಾಗೂ ಲೋಕಸಭಾ ಸದಸ್ಯೆ ಸುಪ್ರಿಯಾ ಸುಳೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಪರಿಸರ ಸಚಿವ ಆದಿತ್ಯ ಠಾಕ್ರೆ ಅವರಿಗೂ ಐಟಿ ಇಲಾಖೆಯು ನೋಟಿಸ್‌ಗಳನ್ನು ಜಾರಿಗೊಳಿಸಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!