ಉಡುಪಿ: ಕೊರೋನಾ ಸಂಕಷ್ಟದಿಂದ ದುಡಿಮೆ ದುಸ್ತರವಾಗಿರುವ ಪ್ರಸಕ್ತ ಸನ್ನಿವೇಶದಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ಒದಗಿರುವ ಖಾಸಗಿ ಮಾರುಕಟ್ಟೆ ಸ್ಥಾಪನೆ ಅವಕಾಶವನ್ನು ರೈತರ ಆರ್ಥಿಕ ಸಶಕ್ತೀಕರಣಕ್ಕೆ ಬಳಸಿಕೊಳ್ಳುವ ರಾಜ್ಯ ಸರಕಾರದ ಚಿಂತನೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.
ಗ್ರಾಮೀಣ ಪ್ರದೇಶಗಳ ಯುವಕರು ಸ್ವಸಹಾಯ ಸಂಘಗಳ ಮಾದರಿಯಲ್ಲಿ ತಾವೇ ಬೆಳೆದ ಕೃಷಿ ಉತ್ಪನ್ನಗಳಿಗೆ ಸರಕಾರದ ನೆರವಿನ ಮೂಲಕ ಸ್ವತಃ ಮಾರುಕಟ್ಟೆ ಒದಗಿಸಲಿರುವ ಪರಿಕಲ್ಪನೆ ಉತ್ಕೃಷ್ಟವಾದುದು. ಗ್ರಾಹಕರಿಗೆ ನ್ಯಾಯ ಬೆಲೆಯಲ್ಲಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನಗಳನ್ನು ಒದಗಿಸುವ ಈ ವಿನೂತನ ಸ್ವಾವಲಂಬಿ ಯೋಜನೆಯು ಸ್ವ-ಉದ್ಯೋಗದ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿಂತನೆಯ ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಒತ್ತು ನೀಡಲಿದೆ ಎಂದು ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.