Thursday, July 7, 2022

Latest Posts

ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: CCB ಪೊಲೀಸರಿಂದ ಆರು ಮಂದಿ ಅರೆಸ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ.
ಚಂದ್ರು, ರಾಚಪ್ಪ ಎಂಬ ಆರೋಪಿಗಳು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಜೊತೆಗೆ ಪ್ರಶ್ನೆಪತ್ರಿಕೆಗಳನ್ನು ಜಪ್ತಿ ಮಾಡಿದ್ದಾರೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧ ಇಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗಿತ್ತು. ನಾಳೆ ಎರಡು ಅವಧಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಕೆಲ ದುಷ್ಕರ್ಮಿಗಳು ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ನಾಳೆ ನಡೆಯಬೇಕಾಗಿದ್ದ ಎಫ್‌ಡಿಎ ಪರೀಕ್ಷೆಯನ್ನು ಮುಂದೂಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss