ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಏಳು ಮಕ್ಕಳು ಸೇರಿದಂತೆ ಇಬ್ಬರು ಚಾಲಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕ್ಯಾಲಿಪೋರ್ನಿಯಾದಲ್ಲಿ ನಡೆದಿದೆ.
ಹೊಸ ವರ್ಷದದ ದಿನದಂದೇ ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅವೆನಾಲ್ ಮತ್ತು ಕೋಲಿಂಗ್ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ 7 ಮಕ್ಕಳು ಮತ್ತು ಚಾಲಕರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಕ್ಯಾಲಿಪೋರ್ನಿಯಾ ಹೆದ್ದಾರಿ ಗಸ್ತುಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.