Thursday, August 11, 2022

Latest Posts

ಎರಡು ಬೈಕ್‌ಗಳ ನಡುವೆ ಡಿಕ್ಕಿ: ಇಬ್ಬರ ಸಾವು

ಮೈಸೂರು: ಎರಡು ಬೈಕ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ
ಹುಣಸೂರು ತಾಲ್ಲೂಕು ಬಿಳಿಕೆರೆ ಗ್ರಾಮದ ಬಳಿ ಸಂಭವಿಸಿದೆ. ಇಲವಾಲ ಗ್ರಾಮದ ರಾಮಚಂದ್ರ (೨೨) ನವೀನ್ (೨೪) ಮೃತಪಟ್ಟವರು. ಕೊಮ್ಮೆಗೌಡ ಕೊಪ್ಪಲು ಗ್ರಾಮದ ಗಿರೀಶ್ ಹಾಗೂ ಕೃಷ್ಣಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಪಲ್ಸರ್ ಬೈಕ್ ಹಾಗೂ ಡಿಯೋ ನಡುವೆ ಈ ಅಪಘಾತ ಸಂಭವಿಸಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss