Monday, August 8, 2022

Latest Posts

ಎರಡು ವರ್ಷಗಳಲ್ಲಿ ರಾಜ್ಯದ 9 ಜಿಲ್ಲೆಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಪ್ರಾರಂಭ: ಡಾ.ಸುಧಾಕರ

ಹೊಸ ದಿಗಂತ ವರದಿ, ಯಾದಗಿರಿ:

ಬರುವ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದ 9 ಜಿಲ್ಲೆಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲಾಗುವುದು ಎಂದು ರಾಜ್ಯ ವೈದ್ಯಕೀಯ ಸಚಿವ ಡಾ. ಸುಧಾಕರ ಹೇಳಿದರು.
ಅವರು ಯಾದಗಿರಿಯಲ್ಲಿ ನೂತನ ವೈದ್ಯಕೀಯ ಕಾಲೇಜಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಾ,
ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 4 ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಪ್ರಧಾನಮಂತ್ರಿ ಮೋದಿ ಮತ್ತು ಸಿಎಂ ಬಿಎಸ್‌ವೈ
ಅವರ ಕಟಿಬದ್ದ ನಿಲವುಕಾರಣ. ಎಂದು ಹೇಳಿದರು.
ದೇಶದಲ್ಲಿಯೇ ಕರ್ನಾಟಕ ಅತಿಹೆಚ್ಚು ವೈದ್ಯಕೀಯ ಕಾಲೇಜು ಹೊಂದಿದ ರಾಜ್ಯವಾಗಿದೆ. ಹಿಂದುಳಿದ ರಾಜ್ಯದ ವೈದ್ಯಕೀಯ
ಕ್ಷೇತ್ರದ ಅಭಿವೃದ್ದಿಗೆ ವೈದ್ಯಕೀಯ ಕಾಲೇಜು ಸ್ಥಾಪನೆ ಸಹಕಾರಿಯಾಗಲಿದೆ. ಕೇಂದ್ರದಿoದ 60% ಹಾಗೂ ರಾಜ್ಯದಿಂದ 40%
ಅನುದಾನ ಒದಗಿಸಲಾಗುವುದು ಎಂದು ಹೇಳಿದರು.
2014 ರಿಂದ ಇಲ್ಲಿಯವರಿಗೆ ದೇಶದಲ್ಲಿ 157 ವೈದ್ಯಕೀಯ ಕಾಲೇಜು ಸ್ಥಾಪನೆಯಾಗಿವೆ ಬರುವ ದಿನಗಳಲ್ಲಿ ಸಾರ್ವಜನಿಕರ ಸಹಯೋಗದಿಂದಿಗೆ ಉಳಿದ 9 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಕಾಲೇಜುಗಳ ಸ್ಥಾಪನೆಯಿಂದ ರಾಜ್ಯದಲ್ಲಿ ಪ್ರತಿವರ್ಷ 10000 ವಿದ್ಯಾರ್ಥಿಗಳು ಹಾಗೂ 5000 ವಿದ್ಯಾರ್ಥಿಗಳು ಸ್ನಾತಕೋತ್ತರ
ಪದವಿ ಪಡೆದುಕೊಳ್ಳಲಿದ್ದಾರೆ. ಇದರಿಂದ ಗ್ರಾಮೀನ ಭಾಗದಲ್ಲಿ ವೈದ್ಯರ ಕೊರತೆ ನೀಗಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 29000 ಕೋವಿಡ್ ಲಸಿಕೆ ವಿತರಣಾ ಕೇಂದ್ರಗಳ ಸ್ಥಾಪನೆ ಮಾಡಿದ್ದೇವೆ. ಹಾಗೂ 1 ಲಕ್ಷ ಆರೋಗ್ಯ ಸಿಬ್ಬಂದಿ ನೇಮಕವಾಗಲಿದ್ದು ಕೇಂದ್ರ ಸರಕಾರದ ಟಿoಡಿms ಪ್ರಕಾರ ಲಸಿಕೆ ವಿತರಣೆಯಾಗಲಿದೆ. ಕೋವಿಡ್ ರೋಗದ ಸಂದರ್ಭದಲ್ಲಿ
ರಾಜ್ಯದ ವೈದ್ಯರು, ಹಾಗೂ ಇತರೆ ಸಿಬ್ಬಂದಿ ಪರಿಶ್ರಮಪಟ್ಟ ಕೆಲಸ ಮಾಡಿದ್ದಾರೆ ಅವರ ಸೇವೆ ಅವಿಸ್ಮರಣೀಯ ಎಂದರು.
ರಾಜ್ಯದಲ್ಲಿ 2500 ವೈದ್ಯರ ನೇರ ನೇಮಕಾತಿ ಮಾಡಿಕೊಳ್ಳಲಾಗಿದೆ. ವೈದ್ಯಕೀಯ ಕಾಲೇಜಿನ ಭೋದಕ ಹಾಗೂ ಭೋದಕೇತರ
ಸಿಬ್ಬಂದಿ ನೇಮಕ ಮಾಡಿಕೊಂಡು 7 ನೆಯ ವೇತನ ಆಯೋಗದ ಅನ್ವಯ ವೇತನ ನೀಡಲಾಗುವುದು ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss