ಹೊಸದಿಗಂತ ಆನ್ ಲೈನ್ ಡೆಸ್ಕ್:
ಲಾಕ್ ಡೌನ್ ವೇಳೆ ಸಂಚಾರ ನಿಯಮಗಳನ್ನು ಗಾಳಿಗೆ ತೂರಿದ್ದ ವಾಹನ ಸವಾರರಿಗೆ ರಾಜ್ಯ ಸಾರಿಗೆ ಇಲಾಖೆ ಕಟ್ಟು ನಿಟ್ಟಾದ ನಿಯಮ ಜಾರಿಗೆ ತಂದಿದೆ.
ಹೌದೂ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ನೀಡಿರುವ ಇಲಾಖೆ, ಲಾಕ್ ಡೌನ್ ಬಳಿಕ ವಾಹನ ಸವಾರರು ಸಂಚಾರ ನಿಯಮಗಳನ್ನು ಗಾಳಿಗೆ ತೂರಿರುವ ಘಟನೆಗಳು ಹೆಚ್ಚಾಗುತ್ತಿರುವುದರಿಂದ ಇಲಾಖೆ ಈ ನಿರ್ಧಾರ ಕೈಗೊಂಡಿದೆ.
ಬೈಕ್ ಸವಾರರು ಹೆಲ್ಮೆಟ್ ರಹಿತ ಹಾಗೂ ಸೀಟ್ ಬೆಲ್ಟ್ ಧರಿಸದೆ ಪ್ರಯಾಣ ಮಾಡುವ ಚಾಲಕರ ಡ್ರೈವಿಂಗ್ ಲೈಸನ್ಸ್ ಅನ್ನು ಮೂರು ತಿಂಗಳು ರದ್ದುಗೊಳಿಸಲಾಗುತ್ತದೆ ಎಂದು ಸೂಚನೆ ನೀಡಿದೆ.