ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೆಲವರಿಗೆ ಎಲ್ಲವನ್ನೂ ಅನುಮಾನಿಸುವ ಪ್ರವೃತ್ತಿ ಇರುತ್ತದೆ. ಸಿದ್ದರಾಮಯ್ಯ ಅವರಿಗೂ ಅಂತಹ ಕಾಯಿಲೆ ಇದ್ದರೆ ಅದು ಅವರ ದೋಷ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಹನುಮ ಹುಟ್ಟಿದ್ದು ಗೊತ್ತಾ” ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ತಾಯಿ “ಇವರೇ ನಿನ್ನ ತಂದೆ” ಎಂದರೆ ಸಾಕ್ಷಿ ಕೇಳಲ್ಲ. ಕೆಲವರು ಪ್ರತಿಯೊಂದಕ್ಕೂ ಸಾಕ್ಷಿ ಕೇಳುವ ಮನಸ್ಥಿತಿ ಹೊಂದಿರುತ್ತಾರೆ. ಸಿದ್ದರಾಮಯ್ಯ ಅವರಿಗೆ ಅಂಥ ಮನಸ್ಥಿತಿ ಇದ್ದರೆ ಅದು ಅವರ ದೋಷ . ನಂಬಿಕೆಯ ಮೇಲೆಯೇ ಜಗತ್ತು ನಿಂತಿದೆ ಎಂದರು.
ನೋಡುವ ದೃಷ್ಟಿ ಇರುವವನಿಗೆ ದೇವರನ್ನು ತೋರಿಸಬಹುದು. ಆದರೆ ನೋಡುವ ದೃಷ್ಟಿ ಇಲ್ಲದವರಿಗೆ ಎಲ್ಲಿ ನಿಂತರೂ ಭಗವಂತವ ಕಾಣುವುದಿಲ್ಲ. ಸಿದ್ದರಾಮಯ್ಯ ಸಹವಾಸ ದೋಷದಿಂದ ಕೆಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.