Wednesday, June 29, 2022

Latest Posts

ಎಲ್ಲಿ ನಿಮ್ಮನ್ನು ತಡೆಯುತ್ತಾರೋ, ಅಲ್ಲೇ ಧರಣಿ ಮಾಡಿ: ರೈತ ಪ್ರತಿಭಟನೆಗೆ ಕರೆ ಕೊಟ್ಟ ಡಿಕೆಶಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಸ್ವಾತಂತ್ರ್ಯ ಹೋರಾಟದ ಮಾದರಿಯಲ್ಲಿಯೇ ರೈತರು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೃಷಿ ಕಾಯ್ದೆಗಳು ರದ್ದಾಗುವವರೆಗೂ ರೈತರ ಹೋರಾಟ ಮುಂದುವರೆಯಲಿದೆ. ರೈತರ ಹೆಸರು ಹೇಳಿ ಪ್ರಮಾಣವಚನ ಸ್ವೀಕಾರ ಮಾಡಿ ಇದೀಗ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ನಿಮ್ಮನ್ನು ಎಲ್ಲಿ ತಡೆಯುತ್ತಾರೋ ಅಲ್ಲೇ ಧರಣಿ ಮಾಡಿ. ಧ್ವಜ ಎತ್ತಿ ಹಿಡಿಯಿರಿ ಎಂದು ರೈತರಿಗೆ ಕರೆ ನೀಡಿದರು.

ಈಗಾಗಲೇ ರೈತರ ಹೋರಾಟ ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿದ್ದು, ನನಗೆ ಮತ್ತು ಸುರೇಶ್ ಗೆ ಕರೆಗಳು ಬರುತ್ತಿವೆ. ಸರ್ಕಾರದ ಈ ನಡೆ ಖಂಡನೀಯ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss