spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಎಸಿಬಿ ದಾಳಿ: ಜೆಇ ಶಾಂತಗೌಡಗೆ ನ್ಯಾಯಾಂಗ ಬಂಧನ

- Advertisement -Nitte

ಹೊಸ ದಿಗಂತ ವರದಿ, ಕಲಬುರಗಿ:

ಜಿಲ್ಲೆಯ ಜೇವರ್ಗಿ ತಾಲೂಕಿನ ಲೋಕೋಪಯೋಗಿ ಇಲಾಖೆಯ ಕಿರಿಯ ಸಹಾಯಕ ಇಂಜಿನಿಯರ್ ಶಾಂತಗೌಡ ಅವರನ್ನು ಗುರುವಾರ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

54 ಲಕ್ಷ ರೂಪಾಯಿ ನಗದು ಸೇರಿದಂತೆ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾದ ಹಿನ್ನೆಲೆಯಲ್ಲಿ ಹಾಗೂ ಬಾತರೂಂನ ಪೈಪನಲ್ಲಿ ಹಣ ಬಚ್ಚಿಟ್ಟಿದ್ದ ಶಾಂತಗೌಡ ಎಸಿಬಿ, ಗೆ ಸಹಕಾರ ನೀಡದ ಕಾರಣ ಬಂಧನಕ್ಕೆ ಒಳಪಡಿಸಲಾಗಿದೆ.

ಬ್ಯಾಂಕ್ ಗಳ ಶೋಧನೆ

ನಿನ್ನೆ ರಾತ್ರಿವರೆಗೂ ಶಾಂತಗೌಡನ ಮನೆಯನ್ನು ಪರಿಶೀಲಿಸಿದ ಎಸಿಬಿ ಅಧಿಕಾರಿಗಳು, ಗುರುವಾರ ಬೆಳಿಗ್ಗೆ ಆತನ ಬ್ಯಾಂಕಿನ ವಹಿವಾಟಿನ ಬಗ್ಗೆ ಶೋಧನೆ ನಡೆಸಿದರು. ಕಲಬುರಗಿ ನಗರದ ಎಸ್.ಬಿ.ಐ. ಬ್ಯಾಂಕ್ ಹಾಗೂ ಕೆನರಾ ಬ್ಯಾಂಕ, ನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.ಬ್ಯಾಂಕ್ ಅಕೌಂಟ್ ನಲ್ಲಿರುವ ಹಣ ಮತ್ತು ಬ್ಯಾಂಕ್ ಲಾಕರ್,ಗಳ ಬಗ್ಗೆ ಪರಿಶೀಲನೆ ಮಾಡಿದ್ದಾರೆ.
ಇನ್ನೂ ಮೂವರು ಡಿವೈಎಸ್ಪಿ ಗಳ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ,ಆದಾಯಕ್ಕಿಂತ 500% ಪ್ರತಿಶತದಷ್ಟು ಅಕ್ರಮ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಪತ್ತೆಯಾಗಿದೆ.
ಗುರುವಾರ ಸಂಜೆ 7 ವರೆಗೂ ಶಾಂತಗೌಡ ಬಿರಾದಾರ್ ಅಕ್ರಮ ಆಸ್ತಿಯ ಬಗ್ಗೆ ನಿಖರವಾದ ಮಾಹಿತಿ ಹೊರಬಿಳಲಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss