Thursday, August 11, 2022

Latest Posts

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಹೊರ ಬೀಳಲು ಶುರುವಾಗಿದೆ ಕ್ಷಣಗಣನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು ನಾಳೆ ವೆಬ್​​ಸೈಟ್​​ ಮೂಲಕ ವೀಕ್ಷಿಸಬಹುದಾಗಿದೆ.
2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ನಾಳೆ ಮಧ್ಯಾಹ್ನ 12 ಗಂಟೆ ನಂತರ https://karresults.nic.in/ ವೆಬ್​ಸೈಟ್​ನಲ್ಲಿ ಮತ್ತು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ದೊರೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss