ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಎಸ್ ಟಿ (ಪರಿಶಿಷ್ಟ ಪಂಗಡ) ಹೋರಾಟಕ್ಕೆ ಸಿದ್ದರಾಮಯ್ಯ ಸಂತೋಷದಿಂದ ಬರುವುದಾದರೆ ಬರಲಿ, ಇಲ್ಲದಿದ್ದರೆ ಸುಮ್ಮನಿರಿ. ಅನಾವಶ್ಯಕ ಗೊಂದಲ ಸೃಷ್ಟಿಸಬೇಡಿ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಎಸ್’ಟಿ ಹೋರಾಟದಿಂದ ನಾನು ಹಿಂದೆ ಸರಿಯುವುದಿಲ್ಲ. ಯಾರು ಏನು ಬೇಕಾದರೂ ಅಂದುಕೊಳ್ಳಲಿ ನಾನಂತೂ ಹೋರಾಟದಲ್ಲಿ ಇದ್ದೇ ಇರುತ್ತೇನೆ ಎಂದರು.
ಕಾಗಿನೆಲೆಯಲ್ಲಿ ಪಾದಯಾತ್ರೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಿದ್ದರಾಮಯ್ಯ ಸಂತೋಷದಿಂದ ಬರುವುದಾದರೆ ಬರಲಿ ಎಂದು ಹೇಳಿದರು.