Friday, July 1, 2022

Latest Posts

ಎಸ್ಸೆಸೆಲ್ಸಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆ ಎದುರಿಸಿ: ಸಚಿವ ಜಾರಕಿಹೊಳಿ

ಬೆಳಗಾವಿ : ವಿದ್ಯಾರ್ಥಿ ಜೀವನದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಮಹತ್ವದ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ಈ ಕುರಿತು ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊರೋನಾ ವೈರಸ್ ಬಿಕ್ಕಟಿನ ಹಿನ್ನಲೆಯಲ್ಲಿ ಮುಂದೂಡಲಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಗುರುವಾರದಿಂದ ನಡೆಯಲಿವೆ.   ಇದ್ದಕ್ಕಾಗಿ ಈಗಾಗಲೇ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆಯೊಂದಿಗೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ.  ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪಾಲಕರು ಯಾವುದಕ್ಕೂ ಹೆದರುವ ಅವಶ್ಯಕತೆ ಇಲ್ಲ. ಪರೀಕ್ಷೆಯನ್ನು ನಡೆಸಲು ಶಿಕ್ಷಣ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಎಂದು ಜಾರಕಿಹೊಳಿ‌ ತಿಳಿಸಿದ್ದಾರೆ.
ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆಯನ್ನು ಮಾಡಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುಬೇಕು. ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಚೆನ್ನಾಗಿ ಬರೆಯಬೇಕೆಂದು ಸಚಿವ ರಮೇಶ ಜಾರಕಿಹೊಳಿ‌ ಶುಭ ಹಾರೈಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss