ನವದೆಹಲಿ: ಇದೇ ೨೫ರಿಂದ ಕರ್ನಾಟಕದಲ್ಲಿ ಪ್ರಾರಂಭವಾಗಲಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದು ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾ ಮಾಡಿದೆ.
ಇದ್ದರಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಸುಗಮವಾಗಿ ನಡೆಲಿದೆ.
ಕೊರೊನಾ ಸಾಂಕ್ರಾಮಿಕ ರೋಗದಿಂದ ಲಕ್ಷಾಂತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಸೂಕ್ತವಲ್ಲ. ಈಗಾಗಲೇ ಹಲವು ರಾಜ್ಯ ಹತ್ತನೇ ತರಗತಿ ಪರೀಕ್ಷೆ ರದ್ದು ಮಾಡಿದೆ. ಅದ್ದರಿಂದ ಕರ್ನಾಟಕ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಬಾರದು ಎಂದು ಕೋರಿ ಬೆಳಗಾವಿಯ ಮರಾಠಾ ಮಂಡಳ ಎಜಿಕೇಶನ್ ಸೊಸೈಟಿಯ ಚೆರಮನ್ ರಾಜಶ್ರೀ ಹಲಗೇಕರ್ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು.
ಆದರೆ ಈ ಅರ್ಜಿಯನ್ನು ಮಾನ್ಯ ಮಾಡಲು ನಿರಾಕರಿಸಿ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್, ಕೃಷ್ಣ ಮುರಾರಿ ಹಾಗೂ ಎಸ್.ರವೀಂದ್ರ ಭಟ್ ಅವರಿದ್ದ ತ್ರಿಸದಸ್ಯ ಸುಪ್ರೀಂ ಕೋರ್ಟ್ ವಜಾ ಮಾಡಿದೆ.