ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ ಮುಂದೂಡಿಕೆ!

0
85

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಹಾಗೂ ಎಸ್‌.ಎಸ್‌.ಎಲ್‌.ಸಿ ವಾರ್ಷಿಕ ಪರೀಕ್ಷೆಗಳನ್ನು ಮುಂದೂಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸೋಮವಾರ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯ ಕೊನೆಯ ಪರೀಕ್ಷೆ ನಡೆಯಬೇಕಿತ್ತು. ಆದರೆ 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಹಿನ್ನೆಲೆ ಸಾರಿಗೆ ವ್ಯವಸ್ಥೆ ಮತ್ತು ಕೊರೋನಾ ಸೋಂಕಿತರು ಪತ್ತೆಯಾಗಿರುವ ಹಿನ್ನೆಲೆ ದ್ವಿತೀಯ ಪಿಯುಸಿಯ ಒಂದು ವಿಷಯ ಪರೀಕ್ಷೆ ಹಾಗೂ ಎಸ್‌.ಎಸ್‌.ಎಲ್‌.ಸಿಯ ಎಲ್ಲಾ ವಿಷಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈಗಾಗಲೇ 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಘೋಷಿಸಲಾಗಿದ್ದು, 7 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತೆ ರಜೆ ಘೋಷಿಸಲಾಗಿದೆ. ಮಾ.27 ರಿಂದ ಆರಂಭವಾಗಬೇಕಿದ್ದ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗಳನ್ನೂ ಮುಂದೂಡಲಾಗಿದ್ದು ಮುಂದೂಡಲಾದ ವೇಳಾಪಟ್ಟಿಯನ್ನು ಮಾ.31ರೊಳಗೆ ಪ್ರಕಟಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here