Sunday, July 3, 2022

Latest Posts

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆಯನ್ನು ಬರೆಯಬೇಕು: ಸುರೇಶ ಅಂಗಡಿ

ಬೆಳಗಾವಿ: ಸರ್ಕಾರ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆಯನ್ನು ಬರೆಯಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಅವರು ಬುಧವಾರ ನಗರದ ಸರದಾರ ಹೈಸ್ಕೂಲ್ ಗೆ ಭೇಟಿ ನೀಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಮಕ್ಕಳು ಹಾಗೂ ಪಾಲಕರು ಯಾವುದೇ ರೀತಿಯ ಭಯ ಪಡಬೇಕಿಲ್ಲ ಎಂದರು.
ವಿದ್ಯಾರ್ಥಿಗಳು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಪರೀಕ್ಷೆ ಬರೆಯಬೇಕು. ಪ್ರತಿ ವರ್ಷದಂತೆ ಉತ್ತಮ ಫಲಿತಾಂಶ ಪಡೆಯಬೇಕು ಎಂದು ಸಚಿವ ಸುರೇಶ ಅಂಗಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಡಿಡಿಪಿಐ ಎ.ಬಿ.ಪುಂಡಲೀಕ ಸೇರಿದಂತೆ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss