Saturday, August 13, 2022

Latest Posts

ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ‘ಭಾರತ ರತ್ನ’ ನೀಡಿ: ಪ್ರಧಾನಿಗೆ ಪತ್ರ ಬರೆದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ!

ಅಮರಾವತಿ: ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ನೀಡುವಂತೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಐದು ದಶಕಗಳ ಕಾಲ ಭಾರತ ಚಿತ್ರರಂಗದಲ್ಲಿ ಗಮನರ್ಹ ಸಾಧನೆ ಮಾಡಿದ ಎಸ್ ಪಿಬಿ ಅವರ ಕಾರ್ಯ ನಮ್ಮ ನೆನಪಿನಲ್ಲಿ ಶಾಶ್ವತವಾಗಿ ಉಳಿಯುವಂತೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಅವರು ಹೇಳಿದ್ದಾರೆ.
‘ ಗಾನ ಗಾರುಡಿಗರು ನಮ್ಮ ರಾಜ್ಯ ಆಂಧ್ರಪ್ರದೇಶದಲ್ಲಿ ಹುಟ್ಟಿದ್ದು, ನಮ್ಮ ಪುಣ್ಯ. ಅವರ ಅಕಾಲಿಕ ಅಗಲಿಕೆ ಭಾರತದ ಅಭಿಮಾನಿಗಳಿಗೆ ತುಂಬಾ ನೋವಾಗಿದೆ. ಅಷ್ಟೇ ಅಲ್ಲ, ಅಂತಾರಾಷ್ಟ್ರೀಯ ಸಂಗೀತ ಸಂಸ್ಥೆಯ ಮೇಲೂ ಪರಿಣಾಮ ಬೀರಿದೆ,’ . ಅವರನ್ನು ಕಳೆದುಕೊಳ್ಳುವ ಮೂಲಕ ಜಗತ್ತಿನ ಸಂಗೀತ ಕ್ಷೇತ್ರ ಬಡವಾಗಿದೆ. ತೆಲುಗು ಮಾತ್ರವಲ್ಲದೇ, ಹಿಂದಿ, ಕನ್ನಡ, ತಮಿಳು, ಮಲಯಾಳಂ ಸೇರಿದಂತೆ 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ ಖ್ಯಾತಿ ಇವರಿಗಿದೆ. ಭಾರತ ರತ್ನ ಪ್ರಶಸ್ತಿ ಪಡೆಯಲು ಅವರು ಅರ್ಹರು ಎಂದು ಕೇಳಿ ಕೊಂಡಿದ್ದಾರೆ.
ಅವರ ಸಾವಿನ ಬಳಿಕ ಎಸ್​ಪಿ ಬಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಸಂಗೀತ ಕ್ಷೇತ್ರದಲ್ಲಿ ದಿಗ್ಗಜ್ಜರಾಗಿದ್ದ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿ ನೀಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ನಟ ಅರ್ಜುನ್​ ಸರ್ಜಾ ಕೂಡ ಈ ಹಿಂದೆ ಪ್ರತಿಕ್ರಿಯಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss