Tuesday, June 28, 2022

Latest Posts

ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ನಿಷೇಧಿಸಲು ಒತ್ತಾಯಿಸಿ ಬಿಜೆಪಿ ದಕ್ಷಿಣ ಯುವ ಮೋರ್ಚಾದಿಂದ ಪ್ರತಿಭಟನೆ

ಹೊಸ ದಿಗಂತ ವರದಿ, ದಾವಣಗೆರೆ:

ಉಜಿರೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಜೊತೆಗೆ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಬಿಜೆಪಿ ದಕ್ಷಿಣ ಯುವ ಮೋರ್ಚಾದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಭಾರತೀಯ ಜನತಾ ಪಾರ್ಟಿ ಯುವ ಮುಖಂಡರು, ಕಾರ್ಯಕರ್ತರು ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಎಸಿ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.
ಉಜಿರೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಸಂದರ್ಭದಲ್ಲಿ ದೇಶದ್ರೋಹಿ ಸಂಘಟನೆಯಾದ ಎಸ್‌ಡಿಪಿಐ ಗೂಂಡಾಗಳು ಪಾಕಿಸ್ತಾನದ ಪರ ಜಿಂದಾಬಾದ್ ಘೋಷಣೆ ಕೂಗಿದ್ದಾರೆ.
ಇಂತಹ ದೇಶದ್ರೋಹಿಗಳನ್ನು ದೇಶದಿಂದಲೇ ಗಡಿಪಾರು ಮಾಡಬೇಕು. ಎಚ್ಚರಿಕೆಯ ರೀತಿಯಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದರು.
ಎಸ್‌ಡಿಪಿಐ ಸಂಘಟನೆಯವರು ಈ ಹಿಂದೆಯೂ ಕೂಡ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸುಮಾರು 22ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದು, ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯಲ್ಲಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಯ ಪದಾಧಿಕಾರಿಗಳೇ ನೇರವಾಗಿ ಭಾಗಿಯಾಗಿದ್ದಾರೆ. ಅದೇ ರೀತಿ ಮಂಗಳೂರಿನಲ್ಲಿ ನಡೆದ ಕೋಮುಗಲಭೆಗೆ ಇದೇ ಸಂಘಟನೆಯ ದೇಶದ್ರೋಹಿಗಳು ನೇರ ಕಾರಣರಾಗಿದ್ದಾರೆ. ಇಂತಹ ದೇಶದ್ರೋಹಿ ಸಂಘಟನೆಗಳನ್ನು ಕೂಡಲೇ ದೇಶಾದ್ಯಂತ ನಿಷೇಧಿಸಬೇಕು ಎಂದು ಅವರು ಒತ್ತಾಯಿಸಿದರು.
ಪಾಲಿಕೆ ಸದಸ್ಯ ತರಕಾರಿ ಶಿವು, ಬಿಜೆಪಿ ಯುವ ಮೋರ್ಚಾ ದಕ್ಷಿಣ ಅಧ್ಯಕ್ಷ ಬಿ.ರಾಕೇಶ, ಮುಖಂಡರಾದ ಪ್ರವೀಣ ಜಾಧವ್, ಸೋಗಿ ಗುರುಶಾಂತ, ರಾಜು ನೀಲಗುಂದ, ಅನಿಲ್, ಮಂಜು, ಪ್ರದೀಪ್, ಸಂದೇಶ್, ಸಚಿನ್, ಅಭಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss